ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಮುಂದಿನ ನಾಲ್ಕು ದಿನಗಳ ಮಲೆನಾಡು ಭಾಗದ ಶಾಲಾಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಕಳಸ,
ಕೊಪ್ಪ, ಶೃಂಗೇರಿ, ಎನ್.ಆರ್ ಪುರ, ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ ಅಂಬಳೆ, ಲಕ್ಯ ಹೋಬಳಿಗಳನ್ನು ಬಿಟ್ಟು ಉಳಿದ ಭಾಗಕ್ಕೆ ರಜೆಯನ್ನು ಘೋಷಿಸಿದ್ದಾರೆ.
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತೀರುವ ಕಾರಣ ಶೈಕ್ಷಣಿಕ ಸಂಸ್ಥೆಗಳಾದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.06ರಿಂದ 9ರ ವರೆಗೆ ರಜೆಯನ್ನು ನೀಡಲಾಗಿದೆ.