ಸುಳ್ಯದ ಹಿಂದೂ ಕಾರ್ಯಕರ್ತ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ಜು 29 ಶುಕ್ರವಾರ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕರೆ ನೀಡಿದ್ದ ಕಳಸ ತಾಲ್ಲೂಕು ಬಂದ್ಗೆ ಕಳಸ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಿ.ಕೆ.ಮಹೇಶ್ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಕಳಸ ಲೈವ್ ಗೆ ಪ್ರತಿಕ್ರೀಯೆ ನೀಡಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ಕರೆ ನೀಡಿರುವ ಕಳಸ ಬಂದ್ಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದು,ಕಳಸ ತಾಲ್ಲೂಕಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಸಂಪೂರ್ಣ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ.