ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕರೆ ನೀಡಿದ್ದ ಕಳಸ ತಾಲ್ಲೂಕು ಬಂದ್ ಗೆ ಉತ್ತಮ ಪ್ರತಿಕ್ರೀಯೆ ವ್ಯಕ್ತವಾಗಿದೆ.
ಪಟ್ಟಣದಲ್ಲಿ ಸರ್ಕಾರಿ ಕಛೇರಿಗಳು, ಬ್ಯಾಂಕ್,ಆಸ್ಪತ್ರೆ, ಮೆಡಿಕಲ್, ಪೆಟ್ರೋಲ್ ಬಂಕ್ ಹೊರತು ಪಡಿಸಿ ಉಳಿದೆಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್ ಗೆ ಸಹಕರಿಸಿದರು.
ತಾಲ್ಲೂಕಿನ ಸಂಸೆ,ಹಿರೇಬೈಲು,ಬಾಳೆಹೊಳೆ ಯಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸಿದರು.