ಕಳಸ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎಂಟು ವರ್ಷಗಳಿಂದ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದ ಸಂತೋಷ್ ಇವರು ಕೊಪ್ಪ ತಾಲ್ಲೂಕಿನ ಜಯಪುರ ಗ್ರಾಮ ಪಂಚಾಯಿತಿಗೆ ವರ್ಗಾವಣೆಯಾಗಿದ್ದಾರೆ.
ಸಾರ್ವಜನಿಕರ ಜೊತೆ ಉತ್ತಮ ನಡವಳಿಕೆಯನ್ನು ಇಟ್ಟುಕೊಂಡಿದ್ದ ಇವರು ಕಳಸ ಜೆಸಿಐ ಸಂಸ್ಥೆಯಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡು ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿದ್ದರು.
ಕೋವಿಡ್ ಸಂದರ್ಭ ಮತ್ತು 2019ರ ಅತಿವೃಷ್ಠಿ ಸಂದರ್ಭದಲ್ಲಿ ಶಕ್ತಿ ಮೀರಿ ಕೆಲಸ ಮಾಡಿದ್ದರು.
ಊರಿನ ಯಾವುದೇ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿದ್ದ ಇವರು ಸಾಕಷ್ಟು ಜನರ ಪ್ರೀತಿಗೆ ಪಾತ್ರರಾಗಿದ್ದರು.