ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಳಸ ಇದರ ಸದಸ್ಯರು ದಕ್ಷಿಣ ಕಾಶಿ ಅಗತ್ಯ ಕ್ಷೇತ್ರ ಕಳಸ ಶ್ರೀ ಕಲಶೇಶ್ವರ ಸ್ವಾಮಿ ದೇವಸ್ಥಾನದ ಆವರಣಸ್ವಚ್ಛತೆ, ದಾಸೋಹ ಭವನದ ಸ್ವಚ್ಛತೆ, ಹೂತೋಟದಲ್ಲಿ ಸ್ವಚ್ಛತೆಯನ್ನು ಮಾಡಿ ಶ್ರದ್ಧಾಕೇಂದ್ರಗಳ ಸ್ವಚ್ಛತೆ ಹಾಗೂ ಮಹತ್ವದ ಅರಿವನ್ನು ಮೂಡಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಶ್ರೀಮತಿ ಸುಜಯಾಸದಾನಂದ, ಮೇಲ್ವಿಚಾರಕರಾದ ಶ್ರೀ ಶಿವರಾಜ್, ವಿಪತ್ತು ಘಟಕದ ಸಂಯೋಜಕರಾದ ಶ್ರೀ ಅಶೋಕ್, ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ, ಒಕ್ಕೂಟದ ಪದಾಧಿಕಾರಿಗಳು ಸದಸ್ಯರು, ಶೌರ್ಯ ಘಟಕದ ಸ್ವಯಂಸೇವಕರು ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಪ್ರೇಮಲತಾ ರವರು, ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.