ಕಳಸದ ಪ್ರಥಮ ದರ್ಜೆ ಕಾಲೇಜು ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಸೋಮವಾರ ಕಳಸದ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಈ ಶಿಬಿರಕ್ಕೆ ಬೇಟಿ ನೀಡಿದ ಶಾಸಕ ಎಂ.ಪಿ.ಕುಮಾರಸ್ವಾಮಿ ವಿದ್ಯಾರ್ಥಿಗಳ ಜೊತೆ ತಾನೂ ಕಣ್ಣು ಪರೀಕ್ಷೆಯನ್ನು ಮಾಡಿಕೊಂಡರು.
ಕಳಸ ಪ್ರಥಮ ದರ್ಜೆ ಕಾಲೇಜು ಕೇವಲ ಶಿಕ್ಷಣಕ್ಕೆ ಮಾತ್ರವಲ್ಲದೆ ಇಲ್ಲಿಯ ವಿದ್ಯಾರ್ಥಿಗಳ ಆರೋಗ್ಯದ ಮೇಲೂ ಕಾಲೇಜಿನ ಆಡಳಿತ ವರ್ಗ ಮತ್ತು ಪ್ರಾಂಶುಪಾಲರು ಅತ್ಯಂತ ಕಾಳಜಿ ವಹಿಸಿ, ಪ್ರತಿಯೊಬ್ಬ ವಿದ್ಯಾರ್ಥಿಗಳ ಕಣ್ಣನ್ನು ಉಚಿತವಾಗಿ ಪರೀಕ್ಷೆ ಮಾಡುತ್ತಿರುವುದು ಪ್ರಶಂಸನೀಯ ಎಂದರು.