ಕಳಸ ತಾಲ್ಲೂಕಿನ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಾವಿನಕೆರೆ ಎಸ್ಟೇಟ್ ಪಾಲುದಾರ ಪ್ರಭುದಾಸ್ ದಾಮೋದರ್ ಕೊಟೇಚಾ ಗುರುವಾರ ಉಚಿತ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೊಟೇಚಾ ಪುತ್ರಿ ಮಾಧವಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮಾಡಿದ್ದಾರೆ. ಇಂತವರನ್ನು ಗುರುತಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಮಕ್ಕಳಿಗೆ ಕಲಿಕೆಗೆ ಪೂರವಾಗುವ ಪುಸ್ತಕಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅನಿಲ್ ಮಹಾರಾಜ್,ಕಳಸ ಗ್ರಾಮ ಪಂಚಾಯಿತಿ ಸದಸ್ಯ ವೀರೇಂದ್ರ ಜೈನ್,ಡಿ.ರಾಜು,ದಿನೇಶ್ ಇತರರು ಇದ್ದರು.