ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಳಸ ಇದರ ಸದಸ್ಯರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣಸ್ವಚ್ಛತೆ, ಹೂತೋಟದಲ್ಲಿ ಸ್ವಚ್ಛತೆಯನ್ನು ಮಾಡಿ
*ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ರಾಷ್ಟ್ರ ಧ್ವಜ ವಿತರಣೆ* ಮಾಡಿ ದೇಶಾಭಿಮಾನ ಮತ್ತು ರಾಷ್ಟ್ರ ಧ್ವಜದ ಮಹತ್ವದ ಬಗ್ಗೆ ಅರಿವನ್ನು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಮೇಲ್ವಿಚಾರಕರಾದ ಶ್ರೀ ಶಿವರಾಜ್, ವಿಪತ್ತು ಘಟಕದ ಸಂಯೋಜಕರಾದ ಶ್ರೀ ಅಶೋಕ್, ಸೇವಾ ಪ್ರತಿನಿಧಿ ಶ್ರೀಮತಿ ಭವ್ಯ, ಸುಧಾಕರ್,ಒಕ್ಕೂಟದ ಪದಾಧಿಕಾರಿಗಳು ಸದಸ್ಯರು, ಶೌರ್ಯ ಘಟಕದ ಸ್ವಯಂಸೇವಕರು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶಶಿಕಲಾ ವೀಣಾ,ನಾಗರತ್ನ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.