ಕ್ರೀಡೆ ದೈಹಿಕ ಹಾಗೂ ಮಾನಸೀಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸುಜಯ ಸದಾನಂದ ಹೇಳಿದರು.
ಅತಿಥೇಯ ಶಾಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕ್ಕಿ ವತಿಯಿಂದ ಕೆಪಿಎಸ್ ಪ್ರೌಢ ಶಾಲಾ ಆವರಣದಲ್ಲಿ ಗುರುವಾರ ನಡೆದ ಕಳಸ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಕೇವಲ ಪಠ್ಯ ಪುಸ್ತಕಕ್ಕೆ ಸೀಮಿತವಾಗಿರದೆ ಕ್ರೀಡೆಗಳಲ್ಲಿ ಭಾಗವಹಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಬೇಕು ಎಂದು ಹೇಳಿದರು.
ಶಿಕ್ಷಕರ ಸಂಘದ ಉಪಾಧ್ಯಕ್ಷ ಮಂಜಪ್ಪ ಮಾತನಾಡಿ ಕ್ರೀಡೆ ಶಾಲಾ ಮಟ್ಟಕ್ಕೆ ಅಂತ್ಯವಾಗಬಾರದು.ಕ್ರೀಡೆಯಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರೋತ್ಸಾಹ ನೀಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಕೆಲಸ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರವಿ ರಾವ್,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಯೋಗಿಶ್ ಶೆಣೈ,ದೈಹಿಕ ಶಿಕ್ಷಣ ಪರಿವೀಕ್ಷಕ ಸುನೀತಾ,ಸಿಆರ್ಪಿಗಳಾದ ಕುಮಾರಸ್ವಾಮಿ,ಸಾವಿತ್ರಿ, ಶಿಕ್ಷಕರಾದ ಕುಮಾರ್, ಶಿವಪ್ಪ,ರೇವತಿ,ಪ್ರೇಮಲತಾ,ಮಂಜುನಾಥ್ ಇದ್ದರು.