ಕಳಸದ ಗಂಗನಕೊಡಿಗೆ ಬಾವಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.
ಗಂಗನಕೊಡಿಗೆ ವಾಸಿ ಶ್ವೇತಾ (29 ವರ್ಷ) ಮೃತ ಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗಿನ ಜಾವ ಈ ಘಟನೆ ಸಂಭವಿಸಿದ್ದು ಮೃತದೇಹವನ್ನು ಹೊರತೆಗೆದು ಕಳಸ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಘಟನೆಗೆ ಕಾರಣಗಳು ತಿಳಿದುಬಂದಿಲ್ಲ.