ಹೊರನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸರಿಮಕ್ಕಿ ಶೈಲಾ ಚಂದ್ರೇಗೌಡ ಇವರ ಮನೆ ಮಳೆಗೆ ಕುಸಿದುಹೋಗಿದೆ.
ಗುರುವಾರ ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಮನೆಯ ಹಿಂಬದಿಯ ಒಂದು ಭಾಗ ಸಂಪೂರ್ಣ ಕುಸಿದು ಹೋಗಿದ್ದು, ಸಾಕಷ್ಟು ಹಾನಿಯಾಗಿದೆ. ಅದೃಷ್ಟ ವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಳಸ ವಿಎ ಪ್ರಸನ್ನ ಕುಮಾರ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.