ಸರ್ಕಾರಿ ಪ್ರೌಢಶಾಲೆ ಸಂಸೆ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಬದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಸಾಪ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಮುಮ್ತಾಜ್ ಬೇಗಂ, ವಿದ್ಯಾರ್ಥಿ ಜೀವನದಲ್ಲಿ ಆದರ್ಶ,ಸಮಯ ಪಾಲನೆ,ಗೌರವ, ಆತ್ಮ ವಿಶ್ವಾಸ ಮತ್ತು ದೃಢ ನಿರ್ಧಾರ, ಧನಾತ್ಮಕ ಚಿಂತನೆಯಿಂದ ವ್ಯಕ್ತಿ ಸಮಾಜಕ್ಕೆ ಶಕ್ತಿ ಅಗಿ ಪರಿವರ್ತನೆ ಆಗಲು ಸಾಧ್ಯವಿದೆ. ಸಮಾಜ ಕಟ್ಟಲು ಮೊದಲು ಕಲಿಕೆಯ ಸಂದರ್ಭದಲ್ಲಿ ಶಿಕ್ಷಕರಿಗೆ ಮತ್ತು ತಂದೆ ತಾಯಿಗೆ ಗೌರವ ಭಾವನೆಯಿಂದ ನಡೆದರೆ ಅಮೂಲ್ಯವಾದ ವ್ಯಕ್ತಿತ್ವ ವಿಕಸನ ಆಗುತ್ತದೆ. ಉತ್ತಮ ಸಮಾಜ ನಿರ್ಮಾಣ ಆಗಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಬೇಕು. ನಿರ್ದಿಷ್ಟ ಗುರಿಗಳನ್ನು ಹೊಂದಬೇಕು. ಮಾದಕವಸ್ತುಗಳಾದ ಧೂಮಪಾನ ಮದ್ಯಪಾನ ಗುಟ್ಕಾ ಸೇವನೆಯಿಂದ ದೂರ ಇರಬೇಕು.ಆಧುನಿಕ ಜೀವನದಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ವಿದ್ಯಾಭ್ಯಾಸದಲ್ಲಿ ಕೊರತೆಗಳನ್ನು ಗಮನಿಸುತ್ತಿದ್ದೇವೆ. ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪಠ್ಯಪುಸ್ತಕಗಳನ್ನು ಹೆಚ್ಚು ಅಧ್ಯಯನ ಮಾಡಿದಲ್ಲಿ ಸಮಾಜದಲ್ಲಿ ಉನ್ನತ ಹುದ್ದೆಯನ್ನು ಏರಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ತಂಡದ ಸದಸ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲೋಕೇಶ್ ಸತೀಶ್ , ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೇಯಂಶ್ ಕುಮಾರ್,
ಶೌರ್ಯ ವಿಪತ್ತು ಘಟಕದ ಸಂಯೋಜಕರಾದ
ಬಿ.ಕೆ.ಮಹೇಶ್, ಸ್ವಯಂ ಸೇವಕರಾದ ಸುಧಾಕರ್ ಪ್ರಗತಿ ಬಂಧು ಸ್ವ ಸಹಾಯ ಸಂಘದ ಒಕ್ಕೂಟದ ಅಧ್ಯಕ್ಷರಾದ ಸತೀಶ್, ಸೇವಾ ಪ್ರತಿನಿಧಿಗಳಾದ ಉಷಾ,ವಿನುತಾ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿ ಗಳು ಇದ್ದರು.