ಕುದುರೆಮುಖದ ಬಿಳಗಲ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೆಳ್ಳಪ್ಪ ಎಂಬುವವರ ಮೇಲೆ ಕರಡಿ ದಾಳಿ ಮಾಡಿ ಗಂಭೀರ ಗಾಯವಾದ ಘಟನೆ ಬುಧವಾರ ನಡೆದಿದೆ.
ಬುಧವಾರ ಬೆಳ್ಳಪ್ಪ ರವರು ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಈ ಸಂದರ್ಭದಲ್ಲಿ ಮರಿಗಳೊಂದಿಗಿದ್ದ ಕರಡಿಯೊಂದು ಏಕಾಏಕಿ ಬೆಳಪ್ಪನವರ ದಾಳಿ ಮಾಡಿ, ಒಂದು ಕಾಲಿಗೆ ಕಚ್ಚಿ ಗಂಭೀರ ಗಾಯ ಮಾಡಿದೆ ಎಂದು ಅವರ ಪುತ್ರ ಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಗಂಭೀರ ಗಾಯಗೊಂಡವರನ್ನು ಕೂಡಲೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಲಾಗಿದೆ.