ಸಂಸೆ ಗ್ರಾಮದ ಗುಳ್ಯ ಪ್ರದೇಶವನ್ನು ಸಂಪರ್ಕಿಸಲು ಸೇತುವೆ ನಿರ್ಮಾಣ ಮಾಡುವ ಬಗ್ಗೆ ಲೋಕೋಪಯೋಗಿ ಇಲಾಖೆಯಿಂದ ಶುಕ್ರವಾರ ಸ್ಥಳ ಪರಿಶೀಲನೆ ನಡೆಸಲಾಯಿತು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಸ್ಥಳ ಪರಿಶೀಲನೆ ನಡೆಸಿದರು. ಈಗ ಕಾಲುಸಂಕ ಇರುವ ಪ್ರದೇಶದಿಂದ ಸ್ವಲ್ಪ ದೂರದಲ್ಲಿ 35 ಮೀಟರ್ ಉದ್ದದ ಸೇತುವೆ ಮತ್ತು ಅದಕ್ಕೆ ಹೊಂದಿಕೊಂಡಂತೆ ರಸ್ತೆ ನಿರ್ಮಾಣ ಮಾಡಲು ಅಂದಾಜು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದರು.
ಮೂರು ತಿಂಗಳ ಹಿಂದೆ ಗುಳ್ಯದ ಅಪಾಯಕಾರಿ ಕಾಲುಸಂಕ ದಾಟಿ ಮಕ್ಕಳು ಶಾಲೆಗೆ ಹೋಗುವ ಬಗ್ಗೆ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಿಶೀಲಿಸಿದ್ದರು. ಗುಳ್ಯ ಗ್ರಾಮದ ಜನರೊಂದಿಗೆ ಚರ್ಚಿಸಿ ಅದಕ್ಕೆ ಬೇಕಾದ ಅನುದಾನವನ್ನು ಕೊಡಿಸಿ ಕೊಡಲಾಗುವುದೆಂದು ಭರವಸೆ ನೀಡಿದ್ದರು. ಅದರಂತೆ ಒಂದು ಕೋಟಿ ರೂಪಾಯಿ ಅನುದಾನವನ್ನು ಒದಗಿಸಿ ಕೊಟ್ಟಿರುತ್ತಾರೆ.
ಆನಂತರ ವಿಧಾನಪರಿಷತ್ ಸದಸ್ಯರಾದ ಎಂ.ಕೆ.ಪ್ರಾಣೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕಳೆದ ಎರಡು ದಿನಗಳ ಹಿಂದೆ ವಿಧಾನಪರಿಷತ್ನಲ್ಲಿ ಎಂ.ಕೆ.ಪ್ರಾಣೇಶ್ ಗುಳ್ಯ ಜನರ ಬಗ್ಗೆ ಮಾತನಾಡಿ ಇನ್ನು ಹೆಚ್ಚಿನ ಅನುದಾನ ಈ ಬಾಗಕ್ಕೆ ನೀಡಬೇಕು ಎಂದು ಆಗ್ರಹಿಸಿದ್ದರು.