ಕಳಸ (ಕಳಸ ಲೈವ್ ವರದಿ)
ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಕಳಸದಿಂದ ಕಾರ್ಮಿಕರನ್ನು ಕರೆದುಹೋಗುತ್ತಿದ್ದ ಕಾರು ಹಾಗೂ ಗಾಳಿಗಂಡಿಯಿಂದ ಕಳಸಕ್ಕೆ ಬರುತ್ತಿದ್ದ ಕಾರುಗಳ ಮಧ್ಯೆ ಹಿನಾರಿ ಎಂಬಲ್ಲಿ ಪರಸ್ಪರ ಡಿಕ್ಕಿಯಾಗಿದೆ.
ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಕಳಸದಿಂದ ಹೋಗುತ್ತಿದ್ದ ಕಾರಿನಲ್ಲಿದ್ದ ಇಬ್ಬರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಘಟನೆ ಸ್ಥಳದಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.