ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ಕೆಪಿಎಸ್ ಪ್ರೌಢ ಶಾಲಾ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೆಪಿಎಸ್ ಪ್ರೌಢ ಶಾಲೆ ವತಿಯಿಂದ ಶುಕ್ರವಾರ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಸರಿಯಾಗಿ 11 ಗಂಟೆಗೆ ನಡೆದ ಕರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಆರು ಗೀತೆಗಳನ್ನು ಹಾಡಲಾಯಿತು.
ಸಾಹಿತ್ಯ ಪರಿಷತ್ತಿನ ಮಹಿಳಾ ತಂಡ ಸದಸ್ಯರು ಲಯಬದ್ದವಾಗಿ ಹಾಡಿದ ಹಾಡಿಗೆ ಶಾಲಾ ಮಕ್ಕಳು ದ್ವನಿ ಗೂಡಿಸಿದರು.
ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತು ಕಳಸ ತಾಲ್ಲೂಕು ಅಧ್ಯಕ್ಷ ಅ.ರಾ.ಸತೀಶ್ಚಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಮಮ್ತಾಜ್ ಬೇಗಂ, ಕೆಪಿಎಸ್ ಶಾಲೆ ಉಪಪ್ರಾಂಶುಪಾಲ ಶಿವಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಂಗನಾಥ್, ಸಾಹಿತಿ ಅ.ರಾ.ರಾಧಕೃಷ್ಣ ಇತರರು ಇದ್ದರು.