ಕಳಸ ಲೈವ್ ವರದಿ
ಕಳಸ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತು ಹೋಬಳಿ ಮಟ್ಟದ ಗ್ರಾಮಸ್ಥರಿಗೆ ನವಂಬರ್ 16 ಮತ್ತು 17ರಂದು ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ ಎಂದು ಕಳಸ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕವೀಶ್ ತಿಳಿಸಿದ್ದಾರೆ.
ಈ ಕ್ರೀಡಾ ಕೂಟಗಳು ಕಳಸ ಕೆಪಿಎಸ್ ಶಾಲಾ ಮೈದಾನದಲ್ಲಿ ನಡೆಯಲಿದ್ದು, ನವಂಬರ್ 16ರಂದು ಕಳಸ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ನಡೆಯಲಿದೆ. 17ರಂದು ಕಳಸ ಹೋಬಳಿ ವ್ಯಾಪ್ತಿಯ ಗ್ರಾಮಸ್ಥರಿಗೆ ಕ್ರೀಡಾಕೂಟ ನಡೆಯಲಿದೆ.
ಕಬಡ್ಡಿ, ಖೋಖೋ, ವಾಲಿಬಾಲ್ ಮತ್ತು ಯೋಗ ಸ್ಫರ್ಧೆಗಳನ್ನು ಮಹಿಳೆಯರಿಗೆ ಮತ್ತು ಪುರುಷರಿಗೆ ಆಯೋಜಿಸಿದ್ದು, ಭಾಗವಹಿಸಲು ಇಚ್ಚಿಸುವವರು ನವಂಬರ್ 15 ರಂದು ಮಧ್ಯಾಹ್ನ 3 ಗಂಟೆಯ ಒಳಗಾಗಿ ತಮ್ಮ ಆಧಾರ್ ಕಾರ್ಡ್ನೊಂದಿಗೆ ಗ್ರಾಮ ಪಂಚಾಯಿತಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು.
ಈ ಸ್ಫರ್ಧೆಗಳಲ್ಲಿ ಅತೀ ಹೆಚ್ಚಿನ ಕ್ರೀಡಾಪಟುಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೇಳಿಕೊಂಡಿದ್ದಾರೆ.