ಕಳಸ ಲೈವ್ ವರದಿ
ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಬುಧವಾರ ಗ್ರಾಮೀಣ ಕ್ರೀಡಾ ಕೂಟಗಳನ್ನು ನಡೆಸಲಾಯಿತು.
ಕಳಸ ತಾಲ್ಲೂಕಿನ ಕಳಸ, ಸಂಸೆ, ಇಡಕಣಿ, ಹೊರನಾಡು ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕ್ರೀಡೆಗಳಾದ ಕಬಡ್ಡಿ, ಖೋಖೋ, ವಾಲಿಬಾಲ್ ಕ್ರೀಡೆಗಳನ್ನು ನಡೆಸಲಾಯಿತು.
ಕಳಸದಲ್ಲಿ ಗ್ರಾಮ ಪಂಚಾಯಿತಿ ಆಧ್ಯಕ್ಷೆ ಸುಜಯ ಸದಾನಂದ ಇಡಕಣಿಯಲ್ಲಿ ಗ್ರಾ.ಪಂ ಅಧ್ಯಕ್ಷ ಜಗದೀಶ್ ಭಂಡಾರಿ, ಸಂಸೆಯಲ್ಲಿ ಗ್ರಾ.ಪಂ ಅಧ್ಯಕ್ಷ ರವಿ ಕುಮಾರ್, ಹೊರನಾಡಿನಲ್ಲಿ ಗ್ರಾ.ಪಂ ಅಧ್ಯಕ್ಷ ವೃಷಭರಾಜ್ ಕ್ರೀಡಾಕೂಟವನ್ನು ಉದ್ಘಾಟಿಸಿ ಆಟಗಾರರಿಗೆ ಶುಭಕೋರಿದರು.
ಸರ್ಕಾರದ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿ ಗ್ರಾಮೀಣ ಕ್ರೀಡಾ ಕೂಟವನ್ನು ಏರ್ಪಡಿಸಿರುವ ಬಗ್ಗೆ ಆಟಗಾರರು ಸಂತಸವನ್ನು ವ್ಯಕ್ತಪಡಿಸಿದರು.ಗೆದ್ದ ಸ್ಫರ್ಧಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಬುಧವಾರ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಆಟಗಾರರಿಗೆ ದಿನಾಂಕ 17ರಂದು ಕಳಸದಲ್ಲಿ ಹೋಬಳಿ ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಸ್ಪರ್ಧೆ ನಡೆಯಲಿದೆ.