ಕಳಸ ಲೈವ್ ವರದಿ
ಕಳಸ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನುಡಿ ನಿತ್ಯೋತ್ಸವ ಭಾವಗೀತೆ ಸ್ಫರ್ಧೆಯನ್ನು ನಡೆಸಲಾಯಿತು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಮಮ್ತಾಜ್ ಬೇಗಂ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾಧ್ಯಕ್ಷರಾದ ಶ್ರೀಮತಿ ಮನೋರಾಧಿನಿ ಧರಣೇಂದ್ರ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಅ.ರಾ.ಸತೀಶ್ಚಂದ್ರ, ಹೋಬಳಿ ಅಧ್ಯಕ್ಷ ಶೇಖರ ಶೆಟ್ಟಿ, ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯ ಸದಾನಂದ ಇದ್ದರು.
ಭಾವಗೀತೆ ಸ್ಪರ್ಧೆಯಲ್ಲಿ 10 ಜನ ಪರಿಷತ್ತಿನ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯ ಸದಾನಂದ ಇವರನ್ನು ಪರಿಷತ್ತು ವತಿಯಿಂದ ಗೌರವಿಸಲಾಯಿತು.