ಕಳಸ ಲೈವ್ ವರದಿ
ಪಕ್ಷದ ಕಾರ್ಯಕ್ರಮಕ್ಕೆ ಮೂಡಿಗೆರೆಗೆ ಮಂಗಳವಾರ ಬಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕಳಸಕ್ಕೆ ಬರುವಂತೆ ಇಲ್ಲಿನ ಬ್ಲಾಕ್ ಕಾಂಗ್ರೆಸ್ ಮನವಿ ಮಾಡಿದೆ.
ವಿಧಾನಸಭೆ ಚುನಾವಣೆಗೆ ಪೂರ್ವ ತಯಾರಿ ನಡೆಸಲು ಮುಂದಿನ ಜನವರಿಯಲ್ಲಿ ಕಳಸದಲ್ಲಿ ಕಾಂಗ್ರೆಸ್ ಪಕ್ಷವು ಬೃಹತ್ ಸಮಾವೇಶ ಹಾಗೂ ಸೇರ್ಪಡೆ ಕಾರ್ಯಕ್ರಮ ನಡೆಸಲು ಉದ್ದೇಶಿಸಿದೆ.ಈ ಸಮಾವೇಶದಲ್ಲಿ ವಿವಿಧ ಪಕ್ಷಗಳಿಂದ ಅನೇಕ ಕಾರ್ಯಕರ್ತರು ಮತ್ತು ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಡಿ.ಕೆ.ಶಿವಕುಮಾರ್ ಅವರನ್ನು ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಶ್ರೇಣಿಕ ಮನವಿ ಮಾಡಿದರು.