ಕಳಸ ಲೈವ್ ವರದಿ
ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಶ್ರೇಯೋಭಿವೃದ್ದಿ ಸಂಘದಿಂದ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆಯುವ ಬೃಹತ್ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮೂಡಿಗೆರೆ ತಾ.ಪಂ ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ತಾಲ್ಲೂಕು ಸಮಿತಿ ಕಳಸ ವತಿಯಿಂದ ಮನವಿ ಸಲ್ಲಿಸಲಾಯಿತು.
ನೌಕರರ ಬೇಡಿಕೆ ಈಡೇರಿಕೆಗೆ ಬೆಳಗಾವಿಯ ಅದಿವೇಶನದ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಬೇಕು ಹಾಗೂ ಬೆಂಬಲ ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು.
ಕಳಸ ತಾಲ್ಲೂಕು ವ್ಯಾಪ್ತಿಯ ಆರು ಗ್ರಾಮ ಪಂಚಾಯಿತಿಯ 12 ನೌಕರರು ಸೋಮವಾರ ಬೆಳಗಾವಿಯಲ್ಲಿ ನಡೆಯುವ ಹೋರಾಟಕ್ಕೆ ಭಾನುವಾರ ತೆರಳಲಿದ್ದಾರೆ.