ಕಳಸ ಲೈವ್ ವರದಿ
ಶೃಂಗೇರಿಯ ಜೆ.ಸಿ.ಬಿ.ಎಂ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಟೆಕ್ವಾಂಡೋ ಸ್ಪರ್ಧೆಯಲ್ಲಿ ಕಳಸದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿ ಚಂದನ್ ಎಸ್. 80 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ದ್ವಿತೀಯ ಬಿ.ಎ. ವಿದ್ಯಾರ್ಥಿ ಕೀರ್ತನ್ ಕೆ.ಪಿ 63 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಕಾಲೇಜಿನ ವಿದ್ಯಾರ್ಥಿಗಳಿಗೆ ಟೆಕ್ವಾಂಡೋ ತರಬೇತಿಯನ್ನು ಕಳಸದಲ್ಲಿ ಟೆಕ್ವಾಂಡೋ ತರಬೇತಿ ಕೇಂದ್ರವನ್ನು ನಡೆಸುತ್ತಿರುವ ಶಕುಂತಲಾ ಪ್ರಕಾಶ್ ರವರು ನೀಡುತ್ತಿದ್ದು, ಅವರ ಮಾರ್ಗದರ್ಶನ ಮತ್ತು ಕಾಲೇಜಿನ ಕ್ರೀಡಾ ವಿಭಾಗದ ಮುಖ್ಯಸ್ಥ ಸುಧೀರ್ ಜೈನ್ ಎಂ.ಎಸ್ ರವರ ನೇತೃತ್ವದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ವಿಜೇತರಾಗಿರುವುದು ಖುಷಿಯ ವಿಚಾರ ಎಂದು ಪ್ರಾಂಶುಪಾಲ ವಿನಯ ಕುಮಾರ್ ಶೆಟ್ಟಿ ತಿಳಿಸಿದರು. ಈ ಸಂಧರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಸಿದ್ಧ ಜೈನ್, ಉಪನ್ಯಾಸಿಕಿ ಅಕ್ಷತಾ ಉಪಸ್ಥಿತರಿದ್ದರು.