ಕಳಸ ಲೈವ್ ವರದಿ
ಕಳಸ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ನಿತೇಶ್ ನನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ.
ಮಂಗಳವಾರ ಮಧ್ಯಾಹ್ನ ಕುದುರೆಮುಖ ಪೆÇಲೀಸರು ಆರೋಪಿಯನ್ನು ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ತನ್ನ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ನಿತೀಶ್ ಊರಿನಿಂದ ನಾಪತ್ತೆಯಾಗಿದ್ದ. ಬಂಧನ ಬೀತಿ ಎದುರಿಸುತ್ತಿದ್ದ ನಿತೇಶ್ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾಗ ಪೆÇಲೀಸರು ಬಲೆಬೀಸಿ ಬಂಧಿಸಿದ್ದಾರೆ.
ಜನವರಿ 10 ರಂದು ಮನೆಯಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಸಂಸೆ ಸಮೀಪದ ಜೋಗಿಕುಂಬ್ರಿ ಗ್ರಾಮದ 17 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು. ಬಾಲಕಿ ಡೆತ್ ನೋಟ್ ನಲ್ಲಿ ನಿತೇಶ್ ಕಾರ್ಗದ್ದೆ ಹೆಸರು ಬರೆದಿದ್ದಳು.
ಈ ಸಂಬಂಧ ಕುದುರೆಮುಖ ಠಾಣೆಯಲ್ಲಿ ನಿತೇಶ್ ವಿರುದ್ಧ ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣ ಕಳಸ ಸುತ್ತಮುತ್ತ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿತ್ತು. ಅಪ್ರಾಪ್ತ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿ ವಂಚಿಸಿ ಆಕೆಯ ಸಾವಿಗೆ ಕಾರಣನಾದ ನಿತೇಶ್ ನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜನರು ಒತ್ತಾಯಿಸಿದ್ದರು. ಇದೀಗ ಪೆÇಲೀಸರು ನಿತೇಶ್ ನನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿ ಕುದುರೆಮುಖಕ್ಕೆ ಕರೆದೊಯುತ್ತಿದ್ದಾರೆ ಎಂದು ಮಾಹಿತಿ ದೊರೆತಿದೆ.