ಕಳಸ ಲೈವ್ ವರದಿ
ಕಳಸ ಮಂಜಿನಕಟ್ಟೆ ಸಮೀಪ ಇರುವ ಶುದ್ಧ ಗಂಗಾ ಘಟಕದಲ್ಲಿ ಮಂಗಳವಾರ ಮದ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಶುದ್ದ ಗಂಗಾ ಘಟಕದೊಳಗೆ ಕಾಣಿಸಿಕೊಂಡ ಬೆಂಕಿಯನ್ನು ಸ್ಥಳದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರು ಗಮನಿಸಿ ಪಂಚಾಯಿತಿ ಗಮನಕ್ಕೆ ತಂದಿದ್ದಾರೆ.ಕೂಡಲೇ ಸ್ಥಳಕ್ಕೆ ಬಂದು ನೋಡುವಾಗ ಸ್ವಿಚ್ ಬೋರ್ಡ್ನಲ್ಲಿ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದು ಕೂಡಲೇ ಬೆಂಕಿಯನ್ನು ನಂದಿಸಲಾಯಿತು.
ಸ್ಥಳದಲ್ಲಿಯೇ ಪ್ರಯಾಣಿಕರ ತಂಗುದಾಣ, ಅಕ್ಕ ಪಕ್ಕದಲ್ಲಿ ಅಂಗಡಿ ಮುಂಗಟ್ಟುಗಳು, ನೂರಾರು ಜನ ಓಡಾಡುವ ಸ್ಥಳ ವಾಗಿರುವುದರಿಂದ ಬೆಂಕಿ ಕಾಣಿಸಿಕೊಂಡ ಸ್ವಲ್ಪ ಹೊತ್ತಿನಲ್ಲಿ ಗಮನಕ್ಕೆ ಬಂದಿರುವ ಪರಿಣಾಮ ಯಾವುದೇ ಅನಾಹುತಗಳು ಸಂಭವಿಸಿಲ್ಲ.
ಘಟನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್ ಸುಟ್ಟು ಹೋಗಿದ್ದು, ಸದ್ಯಕ್ಕೆ ಶುದ್ದಾ ಗಂಗಾ ಘಟಕ ಸ್ಥಗಿತವಾಗಿದೆ.