ಕಳಸ ವೈವ್ ವರದಿ
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.84 ಫಲಿತಾಂಶ ಪಡೆದಿದೆ.
ಪರೀಕ್ಷೆ ಬರೆದಿದ್ದ 154 ವಿದ್ಯಾರ್ಥಿಗಳ ಪೈಕಿ 130 ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ.ಕಲಾ ವಿಭಾಗದಲ್ಲಿ 69 ವಿದ್ಯಾರ್ಥಿಗಳ ಪೈಕಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ 70 ವಿದ್ಯಾರ್ಥಿಗಳ ಪೈಕಿ 62 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದ 15 ವಿದ್ಯಾರ್ಥಿಗಳ ಪೈಕಿ 11 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.ಒಟ್ಟಾರೆ 4 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಮತ್ತು 64 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಆಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 576 ಅಂಕ (ಶೇ.96) ಗಳಿಸಿದ ರಾಜೇಶ್ ಕಾಲೇಜಿಗೆ ಅಗ್ರಸ್ಥಾನದ ಶ್ರೇಯ ಪಡೆದಿದ್ದಾರೆ.ಕಲಾ ವಿಭಾಗದಲ್ಲಿ 530 ಅಂಕ(ಶೇ.88) ಗಳಿಸಿದ ಕೆ.ಪಿ.ಚರಣ್ ಅಗ್ರಸ್ತಾನ ಗಳಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಹರ್ಷಿತಾ 504 ಅಂಕ (ಶೇ.84) ಗಳಿಸಿ ಕಾಲೇಜಿಗೆ ಮೊದಲ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಅನಂತಪದ್ಮನಾಭ ಮಾಹಿತಿ ನೀಡಿದ್ದಾರೆ.