ಕಳಸ ಲೈವ್ ವರದಿ
ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಯ ಸಾಮೂಹಿಕ ವಿವಾಹ, ಹೆಂಚುಗಳ ವಿತರಣೆ, ವಿದ್ಯುಚ್ಛಕ್ತಿ ಸಂಪರ್ಕ ಪತ್ರ ವಿತರಣೆ, ಕೃಷಿ ಉಪಕರಣಗಳ ವಿತರಣೆ, ಸಾಮೂಹಿಕ ಉಪನಯನ ಕಾರ್ಯಕ್ರಮ ಮೇ 7 ಕ್ಕೆ ನಡೆಯಲಿದೆ ಎಂದು ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11.55ಕ್ಕೆ ದೇವಸ್ಥಾನದ ಶ್ರೀ ಲಲಿತಕಲಾ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶ್ರೀ ಮಾದಾರ ಚನ್ನಯ್ಯ ಗುರುಪೀಠ ಚಿತ್ರದುರ್ಗ ಇಲ್ಲಿಯ ಶ್ರೀ ಬಸವಮೂರ್ತಿ ಮದಾರ ಚನ್ನಯ್ಯ ಸ್ವಾಮೀಜಿಗಳು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಕೆ.ಎನ್.ರಮೆಶ್, ಎಸ್.ಪಿ ಶ್ರೀ ಉಮಾ ಪ್ರಶಾಂತ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಪತ್ರಕರ್ತ ಸುದರ್ಶನ ಚನ್ನಂಗಿಹಳ್ಳಿ ಇರಲಿದ್ದಾರೆ.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 7 ರಿಂದ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಭೀಮೇಶ್ವರ ಜೋಷಿ ತಿಳಿಸಿದ್ದಾರೆ.