ಕಳಸ ಲೈವ್ ವರದಿ
ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಸ್ವರ್ಣಮಹೋತ್ಸವ ಅಂಗವಾಗಿ ಶ್ರೀ ಜಗನ್ಮಾತೆಗೆ ಸಾಮ್ರಾಜ್ಯ ಪಟ್ಟಾಭಿಷೇಕ ಮತ್ತು ಮಹಾಕುಂಭಾಭಿಷೇಕ ಮೇ 11 ರಂದು ನಡೆಯಲಿದೆ ಎಂದು ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ಶ್ರೀ ಅನ್ನಪೂರ್ಣ ಮೂಲಮಂತ್ರ ಹವನ ಮತ್ತು ಕುಂಭಾಭಿಷೇಕವನ್ನು ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಾಧೀಕ್ಷರಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಕರಕಮಲ ಸಂಜಾತರಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರ ಅಮೃತ ಹಸ್ತದಿಂದ ನೆರವೇರಲಿದೆ.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 7 ರಿಂದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕøತಿಕ ಪ್ರತಿಷ್ಠಾನ ಉಜಿರೆ ಇವರಿಂದ ಯಕ್ಷಗಾನ ತಾಳಮದ್ದಳೆ.
ಮೇ 10ರಂದು ವಿಧುಶೇಖರ ಭಾರತೀ ಮಹಾಸ್ವಾಮಿಗಳ ಆಗಮನ ಸ್ವಾಗತ, ಧೂಳಿ ಪಾದುಕಾ ಪೂಜೆ ಹಾಗೂ ಸಂಸ್ಥಾನದವರಿಂದ ಶ್ರೀ ಶಾರದಾ ಚಂದ್ರಮೌಳೇಶ್ವರ ದೇವರ ಪೂಜೆ ನಡೆಯಲಿದೆ.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 7ರಿಂದ ಶ್ರೇಯಾ ಬಾಲಾಜಿ ಬೃಂದಾವನ ಕಲಾ ನಿಕೇತನ ಬೆಂಗಳೂರು ಇವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.