ಕಳಸ ಲೈವ್ ವರದಿ
ಕಳಸ ಕಲಶೇಶ್ವರ ಸ್ವಾಮಿ ಮತ್ತು ಪರಿವಾರ ದೇವರುಗಳ ಜೀರ್ಣಾಷ್ಠಬಂಧ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಬುಧವಾರ ಬೆಳಿಗ್ಗೆ ಆನೆಗಣಪತಿ ಸನ್ನಿಧಿಯಲ್ಲಿ ಗಣಹೋಮ ನೆರವೇರಿತು. ಗಿರಿಜಾಂಬ ದೇವರ ಸನ್ನಿಧಿಯಲ್ಲಿ ಜೀರ್ಣಾಷ್ಠಬಂಧ ಬ್ರಹ್ಮಕುಂಭಾಭಿಷೇಕ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಿತು. ನಂತರ ಗಿರಿಜಾಂಬಾದೇವರ ಜೀರ್ಣಾಷ್ಟಬಂಧ, ಬ್ರಹ್ಮ ಕುಂಭಾಭಿಷೇಕ ನೆರವೇರಿತು.
ಜೂ 8ರಂದು ಆನೆವಿಘ್ನೇಶ್ವರ ಸ್ವಾಮಿ ಮತ್ತು ಸರ್ವಾಂಗಸುಂದರಿ ಅಮ್ಮನ ಸನ್ನಿಧಿಯಲ್ಲಿ ಜೀರ್ಣಾಷ್ಠಬಂಧ, ಬ್ರಹ್ಮಕುಂಭಾಭಿಷೇಕ, ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.
ಜೂ 9ರ ಶುಕ್ರವಾರ ಬೆಳಿಗ್ಗೆ 11.55ಕ್ಕೆ ಶೃಂಗೇರಿ ಶಾರದಾ ಪೀಠದ ವಿಧುಶೇಖರ ಸ್ವಾಮೀಜಿ ಕಲಶೇೀಶ್ವರ ಸ್ವಾಮಿ ಮತ್ತು ಪರಿವಾರ ದೇವರಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮಕುಂಭಾಭಿಷೇಕ ನೆರವೇರಿಸಲಿದ್ದಾರೆ.
ಆನಂತರ 12.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ವಿಧುಶೇಖರ ಸ್ವಾಮೀಜಿ ಉಪನ್ಯಾಸ ನೀಡಲಿದ್ದಾರೆ.ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕಿ ನಯನಾ ಮೋಟಮ್ಮ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಸದಸ್ಯ ಎಸ್.ಎಲ್. ಭೋಜೇಗೌಡ, ಜಿ.ಭೀಮೇಶ್ವರ ಜೋಷಿ ಭಾಗವಹಿಸಲಿದ್ದಾರೆ.
ಅಂದು ಸಂಜೆ 6 ಗಂಟೆಗೆ ಓಂ ನಮಃ ಶಿವಾಯ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.