ಕಳಸ ಲೈವ್ ವರದಿ
ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಹೊರನಾಡಿನಲ್ಲಿ ಇದೇ ಶನಿವಾರ ಶ್ರೀಕ್ಷೇತ್ರದ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೊರನಾಡು ಕ್ಷೇತ್ರದ ಧರ್ಮಕರ್ತ ಜಿ.ಭೀಮೆಶ್ವರ ಜೋಷಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಮಾಂಗಲ್ಯ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅನ್ನದಾಸೊಹ ಯೋಜನೆಯಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿಗೆ ತಟ್ಟೆ-ಲೋಟಗಳ ವಿತರಣೆ. ಶೈಕ್ಷಣಿಕ ಅಭಿವೃದ್ಧಿ ಯೋಜನೆಯಲ್ಲಿ ಕಳಸ ತಾಲ್ಲೂಕಿನ ಶಾಲಾ ಮಕ್ಕಳಿಗೆ ಉಚಿತ ಟಿಪ್ಪಣಿ ಪುಸ್ತಕಗಳ ವಿತರಣೆ. ಕಳಸ ತಾಲ್ಲೂಕಿನ ಫ್ರೌಢ ಶಾಲೆಗಳು, ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ. ಕೃಷಿ ಸಮೃದ್ಧಿ ಯೋಜನೆಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಕಲ್ಪವೃಕ್ಷ ಸಸಿಗಳ ವಿತರಣೆ. ಮಹಿಳಾಭಿವೃದ್ಧಿ ಯೋಜನೆಯಲ್ಲಿ ಅರ್ಹ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕಿ ಶ್ರೀಮತಿ ನಯನಾ ಮೋಟಮ್ಮ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಹೊರನಾಡು ಗ್ರಾ.ಪಂ ಅಧ್ಯಕ್ಷ ವೃಷಭರಾಜ್ ಜೈನ್, ಕಳಸ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ.ಮಂಜಪ್ಪಯ್ಯ ಇರಲಿದ್ದಾರೆ ಎಂದು ತಿಳಿಸಿದ್ದಾರೆ.