ಕಳಸ ಲೈವ್ ವರದಿ
ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಲ್ದೂರು ಅರೆನೂರು ಕಂಚುಕಲ್ ದುರ್ಗಾ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ದುರ್ಗಾ ಗ್ರಾಮದ ಕಿನ್ನಿ (60) ಎಂದು ಗುರುತಿಸಲಾಗಿದೆ.
ಕಿನ್ನಿ ಎಂಬುವವರು ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುವಾಗ ಏಕಾಏಕಿ ದಾಳಿ ಮಾಡಿದ ಕಾಡಾಣೆ ತುಳಿದು ಹಾಕಿದೆ ಪರಿಣಾಮ ಕಿನ್ನಿ ಅಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಹಿರಿಯ ಅರಣ್ಯ ಹಿರಿಯ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಪಟಾಕಿ ಸಿಡಿಸಿ ಅರಣ್ಯ ಅಧಿಕಾರಿಗಳು ಆನೆಗಳನ್ನು ಓಡಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ. ಸ್ಥಳಕ್ಕೆ ಸ್ಥಳಿಯರು ಭೇಟಿ ನೀಡ್ತಿರೋದ್ರಿಂದ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಲಾಗಿದೆ.