ಕಳಸ ಲೈವ್ ವರದಿ
2023-24ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಳಸ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಒಟ್ಟು 11 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಪ್ರಥಮ ಕಲಾವಿಭಾಗದ ಸುನಿತಾ ಕೆ. ಸಿ ಇವರು ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಕಲಾವಿಭಾಗದ ವಿಜಯ ವೈ. ಎಸ್. ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಉಳಿದಂತೆ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಅಭಿಷೇಕ್ (ದ್ವಿತೀಯ ವಾಣಿಜ್ಯ ವಿಭಾಗ) ದ್ವಿತೀಯ ಸ್ಥಾನಪಡೆದಿದ್ದಾರೆ. 5000 ಮೀಟರ್ ಕಾಲ್ನಡಿಗೆಯಲ್ಲಿ ಸುಹಾಸ್ ಎಂ.ಡಿ (ಪ್ರಥಮ ವಾಣಿಜ್ಯ ವಿಭಾಗ) ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿಜೇತರಿಗೆ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರುಗಳು ಅಭಿನಂದಿಸಿದರು.
Related Stories
September 6, 2024