ಕಳಸ ಲೈವ್ ವರದಿ
ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ತುದಿಗಾಲಲ್ಲಿ ನಿಲ್ಲಿಸಿರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಮೇ 9ರಂದು ಹೊರ ಬೀಳಲಿದೆ.
ಮೇ 9ರ ಗುರುವಾರ ಬೆಳಿಗ್ಗೆ 10:30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶ ಪ್ರಕಟಿಸಲಿದೆ ಎಂದು ಮಂಡಳಿಯು ತಿಳಿಸಿದೆ.
ವಿದ್ಯಾರ್ಥಿಗಳು ಗುರುವಾರ ಬೆಳಿಗ್ಗೆ 10:30ರ ಬಳಿಕ https://karresults.nic.in ಜಾಲತಾಣದಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ.
ಈಬಾರಿ ಎಸ್ಸೆಎಸ್ಸೆಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರ.ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28058 ವಿದ್ಯಾರ್ಥಿನೀಯರು ಇದ್ದಾರೆ.
Related Stories
September 6, 2024