ಕಳಸ ಲೈವ್ ವರದಿ
ಕಳಸ ಕಲಶೇಶ್ವರ ದೇವಸ್ಥಾನ ರಂಗಮಂದಿರ ಬಳಿ ಮೆಟ್ಟಿಲಲ್ಲಿ ಅಪರಿಚಿತ ವ್ಯಕ್ತಿ ಮೃತ ಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಕಳಸ ಪೇಟೆಯಲ್ಲಿ ಬಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದ ಅಪರಿಚಿತ ವ್ಯಕ್ತಿ ಮೆಟ್ಟಿಲಲ್ಲಿ ಮಲಗಿದ್ದನ್ನು ದೇವಸ್ಥಾನದ ಸಿಬ್ಬಂದಿಗಳು ಗಮನಿಸಿದ್ದಾರೆ. ಬಹಳ ಸಮಯದವರೆಗೆ ಮಲಗಿದ್ದ ವ್ಯಕ್ತಿಯನ್ನು ಅನುಮಾನಗೊಂಡು ಪರಿಕ್ಷಿಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ.
ಸ್ಥಳಕ್ಕೆ ಕಳಸ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ನಂತರ ಮೃತ ವ್ಯಕ್ತಿಯ ಶವವನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಶವಾಗಾರದಲ್ಲಿ ಇಡಲಾಗಿದೆ.
Related Stories
September 6, 2024