ಕಳಸ ಲೈವ್ ವರದಿ
ತಾಲೂಕಿನ ಮರಸಣಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಂಧಿನಗರ ಕರಿಯ ಎಂಬುವವರ ಮನೆಯ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ.
ಶನಿವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಕರಿಯ ಅವರ ಮನೆಯ ಹಿಂಬಂದಿಯಲ್ಲಿದ್ದ ಅಕೇಶಿಯ ಮರವೊಂದು ಮನೆಯ ಮೇಲೆ ಬಿದ್ದಿದೆ. ಪರಿಣಾಮ ಮನೆಯ ಗೋಡೆಗೆ ಹಾನಿಯಾಗಿದ್ದು, ಮೇಲ್ಚಾವಣಿಗೆ ಹಾಕಿದ್ದ ಶೀಟ್ ತುಂಡಾಗಿ ಕೆಳಗೆ ಬಿದ್ದಿದೆ.
ಸ್ಥಳಕ್ಕೆ ಪಂಚಾಯಿತಿ ಅಧಿಕಾರಿಗಳು, ಪಂಚಾಯಿತಿ ಸದಸ್ಯರಾದ ವಿಶ್ವನಾಥ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.