ಕಳಸ ಲೈವ್ ವರದಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಳಸ, ಚಿಕ್ಕಮಗಳೂರು ಜಿಲ್ಲೆ, ಇಲ್ಲಿ 2024-25ನೇ ಸಾಲಿನಿಂದ BCA ಕೋರ್ಸ್ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯನ್ನು ಪಡೆದುಕೊಳ್ಳಬಹುದಾಗಿದೆ.
ಕಲಾ ವಿಭಾಗ, ವಾಣಿಜ್ಯ ಶಾಸ್ತ್ರ ಅಥವಾ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿಯನ್ನು ಪೂರೈಸಿದ ಎಲ್ಲಾ ವಿದ್ಯಾರ್ಥಿಗಳು ಈ ಕೋರ್ಸ್ ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.
ಕಡಿಮೆ ವೆಚ್ಚದಲ್ಲಿ BCA ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೂಡಲೇ ಕಾಲೇಜಿಗೆ ಬಂದು ಪ್ರವೇಶಾತಿ ಮಾಡಿಕೊಳ್ಳಲು ತಿಳಿಸಿದೆ.
ದಂಡ ಶುಲ್ಕವಿಲ್ಲದೇ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: 31/07/2024.
ಹೆಚ್ಚಿನ ಮಾಹಿತಿಗಾಗಿ ಕಾಲೇಜು ಕಛೇರಿಯನ್ನು ಸಂಪರ್ಕಿಸಿ.ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಳಸ