ಕಳಸ ಲೈವ್ ವರದಿ
ಕರ್ನಾಟಕ ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಳಸ ಬ್ಲಾಕ್ ಕಾಂಗೇಸ್ ಸಮಿತಿ ಕಳಸದಲ್ಲಿ ಪ್ರತಿಭಟನೆ ನಡೆಸಿದರು.
ಕಳಸ ಕಲಶೇಶ್ವರ ದೇವಸ್ಥಾನದ ಸಮೀಪದಿಂದ ರಾಜ್ಯ ಪಾಲರ ವಿರುದ್ದ ಘೋಷನೆಗಳು ಕೂಗುತ್ತಾ ಹೊರಟ ಪ್ರತಿಭಟನಾ ಮೆರವಣಿಯು ಕಳಸ ಮುಖ್ಯ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗೇಸ್ ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಮಾತನಾಡಿ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಮುಖ್ಯ ಮಂತ್ರಿಗಳ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ. ಕಾಂಗ್ರೇಸ್ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರದ ಪಾಲುದಾರರು. ಉತ್ತರಾಖಂಡ, ಜಾಖರ್ಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ಸಿದ್ದರಾಮಯ್ಯನವರ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.
ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಶ್ರೇಣಿಕ್ ಮಾತನಾಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ ಎಂದು ಹೇಳಿದರು.
ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ವಿಶ್ವನಾಥ್ ಮಾತನಾಡಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿಂದೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು ಪ್ರಜಾಸತ್ತತ್ಮಕವಾಗಿ ಚುನಾಯಿತರಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಸಂಚು ಮಾಡುತ್ತಿರುವುದು ದುರಾದೃಷ್ಟಕರವಾಗಿದ್ದು ಕಾಂಗ್ರೇಸ್ ಪಕ್ಷ ಇದರ ವಿರುದ್ದ ಖಂಡನೆ ವ್ಯಕ್ತಪಡಿಸುತ್ತದೆ.ನ್ಯಾಯ, ಸತ್ಯದ ಪರವಾಗಿ ಪ್ರಜಾಪ್ರಭುತ್ವದ ಉಳಿವಿನ ಕಾಂಗ್ರೇಸ್ ಪಕ್ಷ ಉಗ್ರ ಹೋರಾಟವನ್ನು ನಡೆಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಶುಕುರು, ಕೆ.ಸಿ.ಮಹೇಶ್, ಸುಜಿತ್, ರಾಮಚಂದ್ರ ಹೆಬ್ಬಾರ್, ಸುಧಾಕರ್, ಸುರೇಶ್ ಭಟ್, ಸಂಶುದ್ದೀನ್, ಶ್ರೀನಿವಾಸ್, ಗಣೇಶ್ ಭಟ್ ಇತರರು ಇದ್ದರು.